ನವದೆಹಲಿ, ಜು 28 (DaijiworldNews/HR): ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಅನೇಕ ಮಂದಿಯನ್ನು ಬಂಧಿಸಲಾಗಿದ್ದು ಘಟನೆಯ ವಿಡಿಯೋ ರೆಕಾರ್ಡ್ ಮಾಡಿದ ವ್ಯಕ್ತಿಯನ್ನೂ ಬಂಧಿಸಿ ಆತನ ಸೆಲ್ ಫೋನ್ ಜಪ್ತಿ ಮಾಡಲಾಗಿದೆ.
ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿ ದೌರ್ಜನ್ಯ ಎಸಗಿರುವ ಪ್ರಕರಣವನ್ನು ಕೇಂದ್ರ ಸರ್ಕಾರ ಕೇಂದ್ರ ಗುಪ್ತಚರ ಸಂಸ್ಥೆಗೆ ತನಿಖೆಗೆ ವಹಿಸಲಿದೆ ಎಂದು ವರದಿಯಾಗಿದೆ.
ಇನ್ನು ಮೇ 4 ರಂದು ಮಣಿಪುರದಲ್ಲಿ ಎರಡು ಬಣಗಳ ನಡುವೆ ಗಲಭೆ ನಡೆದ ನಂತರ ವೀಡಿಯೊವನ್ನು ಚಿತ್ರೀಕರಿಸಲಾಗಿದೆ.
ಈ ವಿಡಿಯೋ ಬಿಡುಗಡೆಯಾದ ನಂತರ ದೇಶದಲ್ಲಿ ದೊಡ್ಡ ಮಟ್ಟದ ಪ್ರತಿಭಟನೆಗಳು ನಡೆದಿದೆ.