ಪಾಟ್ನಾ, ಜು 29 (DaijiworldNews/MS): ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಅವರು ಬ್ಯಾಡ್ಮಿಂಟನ್ ಆಡುತ್ತಿರುವ ವಿಡಿಯೋ ಆನ್ಲೈನ್ನಲ್ಲಿ ಭಾರೀ ಗಮನಸೆಳೆಯುತ್ತಿವೆ.
75 ವರ್ಷದ ಆರ್ಜೆಡಿ ಮುಖ್ಯಸ್ಥ ಲಾಲು ಇತ್ತೀಚೆಗೆ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದರು. ಅಲ್ಲದೆ ಕಳೆದ ವರ್ಷ ಸಿಂಗಾಪುರದಲ್ಲಿ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.
ಲಾಲು ಅವರ ಪುತ್ರ ಹಾಗೂ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಲಾಲು ಬ್ಯಾಡ್ಮಿಂಟನ್ ಆಡುತ್ತಿರುವ ಚಿತ್ರ ಮತ್ತು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ʻಭಯಪಡುವುದು ಹಾಗೂ ತಲೆಬಾಗಲು ಕಲಿತಿಲ್ಲʼ ಎಂಬ ಶೀರ್ಷಿಕೆ ನೀಡಿ ಇನ್ಸ್ಟಾದಲ್ಲಿ ಬರೆದುಕೊಂಡಿದ್ದಾರೆ.