ಬೆಂಗಳೂರು, ಜು 30 (DaijiworldNews/MS): ಪಶ್ಚಿಮ ಘಟ್ಟ ಸಂರಕ್ಷಣೆಗಾಗಿ ಡಾ. ಕಸ್ತೂರಿ ರಂಗನ್ ನೀಡಿದ್ದ ವರದಿಯನ್ನು ಪ್ರಬಲ ವಿರೋಧದ ನಡುವೆಯೂ ಜಾರಿಗೊಳಿಸಲು ಸರ್ಕಾರ ಮುಂದಾಗಿದೆ.
ಈ ವರದಿ ಅವೈಜ್ಞಾನಿಕವಾಗಿದ್ದು ಯಾವುದೇ ಕಾರಣಕ್ಕೂ ಜಾರಿಗೊಳಿಸಬಾರದು ಎಂದು ಹಿಂದಿನ ಬಿಜೆಪಿ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿತ್ತು. ಆದರೆ ಇದಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ ನೆರೆಯ ರಾಜ್ಯಗಳು ಮತ್ತು ಕೇಂದ್ರ ಸರ್ಕಾರದ ಜತೆಗೆ ಸಮಾಲೋಚಿಸಿ ಕಸ್ತೂರಿ ರಂಗನ್ ವರದಿ ಜಾರಿಗೊಳಿಸಲಾಗುವುದು ಎಂದಿದ್ದಾರೆ.
ನಮ್ಮ ಸರಕಾರ ಪಶ್ಚಿಮ ಘಟ್ಟ ಮತ್ತು ಅದರ ಜೀವವೈವಿಧ್ಯಗಳ ರಕ್ಷಣೆ ಹಾಗೂ ಸಂರಕ್ಷಣೆಗೆ ಕಸ್ತೂರಿ ರಂಗನ್ ವರದಿಯನ್ನು ಜಾರಿಗೊಳಿಸಲು ಬದ್ಧವಾಗಿದೆ. ಸಂಜಯ್ ಕುಮಾರ್ ನೇತೃತ್ವದ ಎರಡನೇ ಸಮಿತಿಯು ಡಿಸೆಂಬರ್ ವೇಳೆಗೆ ವರದಿಯನ್ನು ನೀಡುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.