ಶ್ರೀನಗರ, ಜು 30 (DaijiworldNews/HR): ರಜೆಯ ಮೇಲೆ ಮನೆಗೆ ಬಂದಿದ್ದ 25 ವರ್ಷದ ಯೋಧನನ್ನು ಆತನ ವಾಹನದಿಂದ ಅಪಹರಿಸಲಾಗಿದೆ ಎಂದು ಆತನ ಕುಟುಂಬ ಆರೋಪಿಸಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದಿದೆ.
ಜಾವೇದ್ ಅಹ್ಮದ್ ವಾನಿ(25) ಎಂಬ ಭಾರತೀಯ ಸೇನಾ ಸಿಬ್ಬಂದಿಯನ್ನು ಲೇಹ್ (ಲಡಾಖ್) ನಲ್ಲಿ ನಿಯೋಜಿಸಲಾಗಿದ್ದು, ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.
ಇನ್ನು ಅಪಹರಣಕ್ಕೊಳಗಾದ ಯೋಧನ ಪತ್ತೆಗೆ ಭಾರತೀಯ ಸೇನೆ ಮತ್ತು ಪೊಲೀಸರು ಬೃಹತ್ ಶೋಧ ಮತ್ತು ಕಾರ್ಡನ್ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ.