ಬೆಂಗಳೂರು, ಜು 30 (DaijiworldNews/MS): ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗಲು ಹಿಂದಿನ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ವಿದ್ಯಾನಿಧಿ ಯೋಜನೆ ರದ್ದುಗೊಳ್ಳುವ ಸಾಧ್ಯತೆಯಿದ್ದು, ಸರ್ಕಾರ ಈ ಯೋಜನೆ ಮುಂದುವರಿಸುವ ಬಗ್ಗೆ ಇಲ್ಲಿವರೆಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ.
2021ರಿಂದ ಈ ಯೋಜನೆ ಜಾರಿಯಲ್ಲಿದ್ದು 19 ಲಕ್ಷ ವಿದ್ಯಾರ್ಥಿಗಳು ಪ್ರಯೋಜನ ಪಡೆದುಕೊಂಡಿದ್ದಾರೆ. ಈ ಯೋಜನೆ ರದ್ದುಗೊಳಿಸಿರುವುದಾಗಿ ಬಿಜೆಪಿ ಆರೋಪಿಸಿದ್ದು, ಸರ್ಕಾರದಿಂದ ಅಧಿಕೃತ ಆದೇಶ ಬಂದಿಲ್ಲ.
ಈ ಯೋಜನೆಯಡಿ ಪಿಯುಸಿಯಿಂದ ಸ್ನಾತಕೋತ್ತರ ಪದವಿ, ವೃತ್ತಿ ಕೋರ್ಸ್ಗಳವರೆಗೆ ವಿದ್ಯಾರ್ಥಿಗಳಿಗೆ ೨೫೦೦ರೂ.ನಿಂದ ಹಿಡಿದು 11,000ವರೆಗೆ ವಿದ್ಯಾರ್ಥಿವೇತನ ನೀಡಲಾಗುತ್ತಿದೆ.
ಕೃಷಿ ಇಲಾಖೆ ಮೂಲಕ ಅನುಷ್ಟಾನಗೊಂಡಿರುವ ಈ ಯೋಜನೆಯಡಿ ಮೊದಲ ವರ್ಷ ವಿದ್ಯಾರ್ಥಿಗಳು ತಾವು ಕಲಿಯುವ ಶಿಕ್ಷಣ ಸಂಸ್ಥೆ ಮೂಲಕ ದಾಖಲೆಗಳನ್ನು ಸಲ್ಲಿಸಬೇಕಾಗಿತ್ತು.