ಮೈಸೂರು, ಏ 09(SM): ಮಂಡ್ಯದಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಅವರ ಪರ ಪ್ರಧಾನಿ ನರೇಂದ್ರ ಮೋದಿಯವರು ಬ್ಯಾಟ್ ಬೀಸಿದ್ದಾರೆ. ಬಿಜೆಪಿ ಸಮಾವೇಶದಲ್ಲಿ ಸಮ್ಮಿಶ್ರ ಸರ್ಕಾರವನ್ನು ಪ್ರಧಾನಿ ನರೇಂದ್ರ ಮೋದಿಯವರು ತರಾಟೆಗೆ ಎತ್ತಿಕೊಂಡಿದ್ದಾರೆ. ಜೊತೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಅವರಿಗೆ ಬೆಂಬಲ ನೀಡುವಂತೆಯೂ ಕರೆ ನೀಡಿದರು.
ತಮ್ಮ ಭಾಷಣದ ಮಧ್ಯೆ ಅಂಬರೀಶ್ ಅವರನ್ನು ನೆನಪಿಸಿಕೊಂಡ ಮೋದಿಯವರು, ಅಬರೀಶ್ ಅವರು ಕರ್ನಾಟಕಕ್ಕೆ ನೀಡಿದ ಕೊಡುಗೆಯನ್ನು ಮರೆಯುವಂತಿಲ್ಲ. ಅಂಬರೀಶ್ ಅವರೊಂದಿಗೆ ಕನ್ನಡಕ್ಕಾಗಿ ಸುಮಲತಾ ಅವರು ಕೂಡ ಕೆಲಸ ಮಾಡಿದ್ದಾರೆ ಎಂದರು.
ಮಂಡ್ಯದಲ್ಲಿದ್ದುಕೊಂಡು ಅಂಬರೀಶ್ ಅವರು ಕನ್ನಡಕ್ಕೆ ಅಪಾರವಾದ ಕೊಡುಗೆ ನೀಡಿದ್ದಾರೆ. ಅವರ ಕೆಲಸ ಶ್ಲಾಘನೀಯವಾಗಿದೆ. ಅವರ ಆ ಪ್ರಯತ್ನಗಳನ್ನು ನಾವು ಇನ್ನಷ್ಟು ಗಟ್ಟಿಗೊಳಿಸಬೇಕಿದೆ. ಮಂಡ್ಯದ ಜನತೆ ಸುಮಲತಾ ಅಂಬರೀಶ್ ಅವರಿಗೆ ಬೆಂಬಲಿಸುತ್ತಿರಿ ಎಂಬ ಭರವಸೆ ನನಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.