ಬೆಂಗಳೂರು, ಆ 31 (DaijiworldNews/HR): ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಅವರನ್ನು ಅನಾರೋಗ್ಯ ಹಿನ್ನೆಲೆ ಮಂಗಳವಾರ ತಡರಾತ್ರಿ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಅವರನ್ನು ಐಸಿಯುನಿಂದ ವಾರ್ಡ್ಗೆ ಶಿಫ್ಟ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಎಡಭಾಗದಲ್ಲಿ ರಕ್ತನಾಳ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಕುಮಾರಸ್ವಾಮಿ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಗುರುವಾರ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ವೈದ್ಯರು ಅವರನ್ನು ಐಸಿಯುನಿಂದ ವಾರ್ಡ್ಗೆ ಶಿಫ್ಟ್ ಮಾಡಿದ್ದಾರೆ.
ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿರುವ ಕುಮಾರಸ್ವಾಮಿ ಅವರನ್ನು ನಿರ್ಮಲಾನಂದ ಶ್ರೀಗಳು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ ಎನ್ನಲಾಗಿದೆ.