ನವದೆಹಲಿ, ಆ 31 (DaijiworldNews/HR): ನಾವು ಯಾವುದೇ ಸಮಯದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ನಡೆಸಲು ಸಿದ್ಧರಿದ್ದೇವೆ ಎಂದು ಸುಪ್ರೀಂ ಕೋರ್ಟ್ಗೆ ಕೇಂದ್ರ ಸರ್ಕಾರ ತಿಳಿಸಿದೆ.
ಜಮ್ಮು ಮತ್ತು ಕಾಶ್ಮೀರದ ರಾಜ್ಯ ಸ್ಥಾನಮಾನವನ್ನು ಮರುಸ್ಥಾಪಿಸಲು ನಿರ್ದಿಷ್ಟ ಸಮಯ ನೀಡಲು ಸಾಧ್ಯವಿಲ್ಲ. ಆದರೆ ಕೇಂದ್ರಾಡಳಿತ ಸ್ಥಾನಮಾನವು ತಾತ್ಕಾಲಿಕವಾಗಿದ್ದು, ಈ ನಿಟ್ಟಿನಲ್ಲಿ ಚುನಾವಣೆ ನಡೆಸಲು ಸಿದ್ಧ ಎಂದು ಕೇಂದ್ರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.
ಇನ್ನು ಜಮ್ಮು ಮತ್ತು ಕಾಶ್ಮೀರವನ್ನು ಸಂಪೂರ್ಣ ರಾಜ್ಯವಾಗಿಸಲು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು, 2018 ರಿಂದ 2023ಕ್ಕೆ ಹೋಲಿಸಿದರೆ ಭಯೋತ್ಪಾದಕ ಪ್ರಕರಣಗಳು 45.2% ರಷ್ಟು ಕಡಿಮೆಯಾಗಿದೆ ಎಂದು ಕೇಂದ್ರ ತಿಳಿಸಿದೆ.