ನವದೆಹಲಿ, ಸೆ 03 (DaijiworldNews/HR): ದೇಶದಲ್ಲಿ ಭ್ರಷ್ಟಾಚಾರ, ಜಾತಿವಾದ ಮತ್ತು ಕೋಮುವಾದಕ್ಕೆ ಯಾವುದೇ ಸ್ಥಾನವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಸ್ವಾತಂತ್ರ್ಯದ 100ನೇ ವರ್ಷವನ್ನು ಆಚರಿಸುವಾಗ ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲಿದ್ದು, ಭ್ರಷ್ಟಾಚಾರ, ಜಾತಿವಾದ ಮತ್ತು ಕೋಮುವಾದಕ್ಕೆ ಯಾವುದೇ ಸ್ಥಾನವಿಲ್ಲ ಎಂದರು.
ಇನ್ನು ನಮ್ಮ ಮಾತುಗಳು ಮತ್ತು ದೃಷ್ಟಿಯನ್ನು ಪ್ರಪಂಚವು ಭವಿಷ್ಯದ ಮಾರ್ಗಸೂಚಿಯಾಗಿ ನೋಡುತ್ತದೆ, ಕೇವಲ ಕಲ್ಪನೆಗಳಲ್ಲ” ಎಂದಿದ್ದಾರೆ.
ವಿಶ್ವದ ಜಿಡಿಪಿ-ಕೇಂದ್ರಿತ ದೃಷ್ಟಿಕೋನವು ಮಾನವ-ಕೇಂದ್ರಿತ ದೃಷ್ಟಿಕೋನಕ್ಕೆ ಬದಲಾಗುತ್ತಿದ್ದು, ಈ ಪರಿವರ್ತನೆಯಲ್ಲಿ ಭಾರತವು ವೇಗವರ್ಧಕವನ್ನು ವಹಿಸುತ್ತಿದೆ ಎಂದು ಹೇಳಿದ್ದಾರೆ.