ಬೆಂಗಳೂರು, ಸೆ 04 (DaijiworldNews/MS): ನಕಲಿ ಫೇಸ್ಬುಕ್ ಸೃಷ್ಟಿಸುವವರು ರಾಜ್ಯದ ಪ್ರಥಮ ಪ್ರಜೆಯನ್ನು ಬಿಟ್ಟಿಲ್ಲ. ಕರ್ನಾಟಕ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಹೆಸರು ಬಳಸಿಕೊಂಡು ನಕಲಿ ಫೇಸ್ಬುಕ್ ಖಾತೆ ಓಪನ್ ಮಾಡಲಾಗಿದೆ.
ರಾಜ್ಯಪಾಲರ ಫೋಟೋ, ಹೆಸರು ಬಳಸಿ ಫೇಸ್ಬುಕ್ ಖಾತೆ ತೆರೆಯಲಾಗಿದ್ದು ಈ ಬಗ್ಗೆ ಗಮನಕ್ಕೆ ಬರುತ್ತಿದ್ದಂತೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಎಫ್ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ