ಬೆಂಗಳೂರು,ಸೆ 06 (DaijiworldNews/AK): ಬರದ ಆತಂಕದ ನಡುವೆ ರಾಜ್ಯದಲ್ಲಿ ಮಳೆರಾಯ ಅಗಮನವಾಗಿದೆ. ಮುಂದಿನ ಮೂರ್ನಾಲ್ಕು ದಿನ ರಾಜ್ಯಾದ್ಯಂತ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಮಳೆ ಜೊತೆ ಶೀತಗಾಳಿ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಇಲಾಖೆ ಸೂಚನೆ ಕೊಟ್ಟಿದೆ. ಉತ್ತರ ಒಳನಾಡು, ಕರಾವಳಿಯಲ್ಲಿ ಭಾರೀ ಮಳೆಯಾಗಲಿದ್ದು ರಾಜ್ಯದ ಏಳು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಭಾರತೀಯ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಿಸಿದೆ.ದಕ್ಷಿಣ ಒಳನಾಡಿನ ಕೆಲವೆಡೆ ಮಳೆ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳು ಉತ್ತರ ಒಳನಾಡಿನ ಬೀದರ್, ರಾಯಚೂರು, ಕೊಪ್ಪಳ, ಕಲಬುರಗಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.
ಉತ್ತರ ಒಳನಾಡು ಕರಾವಳಿ ಭಾಗಗಳಿಗೆ ಗುಡುಗು ಮಿಂಚಿನ ಎಚ್ಚರಿಕೆಯನ್ನು ಹವಮಾನ ಇಲಾಖೆ ನೀಡಿದೆ. ದಕ್ಷಿಣ ಒಳನಾಡು ಭಾಗದಲ್ಲಿ ಗಾಳಿಯ ವೇಗ 40-50 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.