ಬೆಂಗಳೂರು, ಸೆ 14 (DaijiworldNews/MS): ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಚೈತ್ರಾ ಕುಂದಾಪುರ ಪ್ರಕರಣಕ್ಕೂ ಹಿಂದೂ ಸಂಘಟನೆಗೂ ಮಿಕ್ಸಪ್ ಮಾಡುವುದು ಬೇಡ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಬಂಧನ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, ಹಿಂದೂ ಸಂಘಟನೆಗೆ ಈ ಪ್ರಕರಣವನ್ನು ಬೆರೆಸಿ ನೋಡುವುದು ಸರಿಯಲ್ಲ ನನಗೆ ಬಂದ ಮಾಹಿತಿ ಪ್ರಕಾರ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹಣ ಪಡೆದಿದ್ದಾರೆ. 3.5 ಕೋಟಿ ರೂಪಾಯಿ ಹಣ ಪಡೆದಿರುವ ಬಗ್ಗೆ ಕಂಪ್ಲೆಂಟ್ ಆಗಿದೆ. ಸಿಸಿಬಿ ಪೊಲೀಸರ ತನಿಖೆ ಬಳಿಕ ಉಳಿದ ವಿಚಾರ ಗೊತ್ತಾಗಲಿದೆ. ಕೇಸ್ನಲ್ಲಿ ಸ್ವಾಮೀಜಿ ಭಾಗಿಯಾಗಿದ್ದರೆ ಅವರ ಬಂಧನವೂ ಆಗುತ್ತದೆ. ಪೊಲೀಸರು ಸುಮೊಟೋ ಕೇಸ್ ದಾಖಲಿಸಿಲ್ಲ. ಕಂಪ್ಲೆಂಟ್ ಆಧಾರದ ಮೇಲೆ ಚೈತ್ರಾ ಕುಂದಾಪುರ ಬಂಧನ ಆಗಿದೆ ಎಂದು ಹೇಳಿದ್ದಾರೆ.
ಯಾರೇ ತಪ್ಪು ಮಾಡಿದರೂ ಕೂಡ ಕಾನೂನಿನಡಿ ಕ್ರಮ ಆಗಲಿದೆ. ಚೈತ್ರಾ ಕುಂದಾಪುರ ಹಿಂದೂ ಪರವಾಗಿ ಭಾಷಣ ಮಾಡಿದ್ದಾರೆ. ಈ ಪ್ರಕರಣವನ್ನು ಅದಕ್ಕೆ ಮಿಕ್ಸಪ್ ಮಾಡುವುದು ಬೇಡ ಎಂದಿದ್ದಾರೆ.
ಇಂದಿರಾ ಕ್ಯಾಂಟಿನ್ ಬಿಲ್ ಗಾಗಿ ಈ ಪ್ಲಾನ್ ಮಾಡಲಾಗಿದೆ ಎಂಬ ಆರೋಪಕ್ಕೂ ಇದಕ್ಕೂ ವಂಚನೆ ಕೇಸ್ ಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.