ಕೊಪ್ಪಳ, ಸೆ 17 (DaijiworldNews/HR): ಬಿಜೆಪಿಯಲ್ಲಿ ವಿಪಕ್ಷ ನಾಯಕನ ಆಯ್ಕೆಗೆ ಟೆಂಡರ್ ಪ್ರಕ್ರಿಯೆ ಇನ್ನೂ ಮುಗಿದಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿಕ ಇಲಾಖೆ ಸಚಿವ ಶಿವರಾಜ ತಂಗಡಗಿ ವ್ಯಂಗ್ಯವಾಡಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದ ನಾಯಕರೇ ಹೇಳಿದ ಹಾಗೆ ಮುಖ್ಯಮಂತ್ರಿ ಹುದ್ದೆಗೆ ಹಣ ನಿಗದಿಪಡಿಸಿದಂತೆ ವಿಧಾನಸಭೆ ವಿರೋಧ ಪಕ್ಷದ ನಾಯಕನ ಆಯ್ಕೆಗೂ ಇಂತಿಷ್ಟು ಹಣವನ್ನು ನೀಡಬೇಕು ಎಂದು ಒಪ್ಪಂದ ಆಗಿದೆ. ಆದರೆ, ಆ ಹಣದ ಟೆಂಡರ್ ಪ್ರಕ್ರಿಯೆ ಇನ್ನೂ ಮುಗಿದಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ಇನ್ನು ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ಬಹುಕೋಟಿ ರೂಪಾಯಿ ಪಡೆದು, ವಂಚಿಸಿರುವ ಚೈತ್ರಾ ಕುಂದಾಪುರ ವಿಚಾರ ಇಡೀ ರಾಜ್ಯಕ್ಕೆ ಗೊತ್ತಾಗಿದೆ ಎಂದು ಟೀಕಿಸಿದ್ದಾರೆ.