ನವದೆಹಲಿ, ಸೆ 18 (DaijiworldNews/HR): ಹಾಸನ ಲೋಕಸಭಾ ಕ್ಷೇತ್ರದ ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅವರನ್ನು ಅಮಾನತುಗೊಳಿಸಿದ್ದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸರ್ವೋಚ್ಛ ನ್ಯಾಯಾಲಯವು ಸೋಮವಾರ ತಡೆಯಾಜ್ಞೆ ನೀಡಿದೆ.
ಪ್ರಜ್ವಲ್ ರೇವಣ್ಣ ಅವರು 2019ರ ಲೋಕಸಭಾ ಚುನಾವಣೆಯಲ್ಲಿ ಸುಳ್ಳು ದಾಖಲೆಗಳನ್ನು ಕೇಂದ್ರ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದರು ಎಂದು ದೇವರಾಜೇ ಗೌಡ ಅವರು ದೂರು ಸಲ್ಲಿಸಿದ್ದರು.
ಇನ್ನು ವಿಚಾರಣೆಯ ಬಳಿ ಸೆ.1ರಂದು ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಘೋಷಿಸಿತ್ತು. ಅಮಾನತು ಆದೇಶಕ್ಕೆ ತಾತ್ಕಾಲಿಕ ತಡೆ ನೀಡುವಂತೆ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿದರೂ, ಅದನ್ನೂ ನ್ಯಾಯಾಲಯ ತಿರಸ್ಕರಿಸಿತ್ತು.
ಪ್ರಜ್ವಲ್ ರೇವಣ್ಣ ಅವರು ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ್ದರು. ಇದೀಗ ಸಿಜೆಐ ಚಂದ್ರಚೂಡ್ ಅವರಿದ್ದ ತ್ರಿಸದಸ್ಯ ಪೀಠವು ನಾಲ್ಕು ವಾರಗಳ ಕಾಲ ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಿದೆ.