ನವದೆಹಲಿ, ಸೆ 22 (DaijiworldNews/HR): ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರದ ಬಗ್ಗೆ ನಾನು ಏನೂ ಮಾತನಾಡುವುದಿಲ್ಲ. ಈ ಹಿಂದೆಯೇ ಹೇಳಿದ್ದೇನೆ. ಮೈತ್ರಿ ವಿಚಾರದ ಬಗ್ಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮಾತನಾಡುತ್ತಾರೆ ಎಂದು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಹೇಳಿದ್ದಾರೆ.
ಬಿಜೆಪಿ-ಜೆಡಿಎಸ್ ಮೈತ್ರಿ ಸಾಕಷ್ಟು ಚರ್ಚೆಯಾಗುತ್ತಿದ್ದು, ಈ ಸಂಬಂಧ ಇಂದು ದೇವೇಗೌಡ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲಿದ್ದಾರೆ.
ಇನ್ನು ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶಿಸಿದ್ದು, ಕಾವೇರಿ ನದಿ ವಿಚಾರದಲ್ಲಿ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದ್ದೇನೆ. ಕಾವೇರಿ ವಿಚಾರದಲ್ಲಿ ನಾನು ಯಾವುದೇ ಸಲಹೆ ಕೊಡಲ್ಲ. ಸುಪ್ರೀಂಕೋರ್ಟ್ ತೀರ್ಪು ನೀಡಿದ ಹಿನ್ನೆಲೆಯಲ್ಲಿ ಈಗ ನಾನು ಏನೂ ಮಾತಾಡಲ್ಲ. ನೀರು ಬಿಟ್ಟಿದ್ದು ತಪ್ಪು ಅಂತಾ ಪಕ್ಷದ ಪರ ಹೆಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ ಎಂದರು.