ಮೈಸೂರು, ಸೆ 22 (DaijiworldNews/HR): ಕರ್ನಾಟಕದಲ್ಲಿ ಬರಗಾಲ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ಹೊರ ರಾಜ್ಯಗಳಿಗೆ ಮೇವು ಸಾಗಾಟವನ್ನು ನಿಲ್ಲಿಸುವ ಅನಿವಾರ್ಯತೆ ಎದುರಾಗಿದೆ ಎಂದು ಪಶುಸಂಗೋಪನೆ ಖಾತೆ ಸಚಿವ ಕೆ ವೆಂಕಟೇಶ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇವು ಸಾಗಾಣಿಕೆ ನಿಷೇಧ ಸಂಬಂಧ ಜಿಲ್ಲಾಧಿಕಾರಿಗೆ ಸೂಚಿಸಲಾಗಿದ್ದು, ಸದ್ಯಕ್ಕೆ ಕುಡಿಯುವ ನೀರಿನ ಕೊರತೆ ಉಂಟಾಗಿಲ್ಲ. ಮುಂದೆ ಯಾವುದೇ ಪರಿಸ್ಥಿತಿ ಎದುರಾದರೂ ನಿಭಾಯಿಸಲು ಸಿದ್ದರಾಗಿದ್ದೇವೆ ಎಂದರು.
ಇನ್ನು ಕಾವೇರಿ ಜಲವಿವಾದ ವಿಚಾರದಲ್ಲಿ ಸರ್ಕಾರ ಸಮರ್ಥವಾಗಿ ವಾದ ಮಂಡಿಸಿದೆ. ಆದರೆ ನೀರು ನಿರ್ವಹಣಾ ಪ್ರಾಧಿಕಾರ ನೀರು ಬಿಡುವಂತೆ ಆದೇಶಿಸಿದೆ. ಈ ವಿಚಾರದಲ್ಲಿ ನಮ್ಮಲ್ಲಿ ಒಗ್ಗಟ್ಟು ಇದೆ. ಆದರೂ ಕೆಲವರು ಈ ವಿಚಾರದಲ್ಲೂ ರಾಜಕೀಯ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.