ನವದೆಹಲಿ, ಸೆ 22 (DaijiworldNews/HR): ಭ್ರಷ್ಟಾಚಾರ ಮತ್ತು ಉಗ್ರರ ಜೊತೆಗೆ ನಂಟು ಹೊಂದಿರುವ ಆರೋಪಕ್ಕೆ ಸಂಬಂಧಿಸಿ ಜಮ್ಮು ಮತ್ತು ಕಾಶ್ಮೀರಡಾ ಉನ್ನತ ಪೊಲೀಸ್ ಅಧಿಕಾರಿಯನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಜಮ್ಮು ಕಾಶ್ಮೀರದ ಪೊಲೀಸ್ ಉಪ ಅಧೀಕ್ಷಕರಾಗಿರುವ ಶೇಖ್ ಆದಿಲ್ ಮುಷ್ತಾಕ್ ಬಂಧಿತ ಆರೋಪಿ.
ಈ ಕುರಿತು ಉನ್ನತ ಅಧಿಕಾರಿಗಳು ಮಾಹಿತಿ ನೀಡಿದ್ದು, ಭ್ರಷ್ಟಾಚಾರ ಮತ್ತು ಉಗ್ರರ ಜೊತೆಗೆ ನಂಟು ಹೊಂದಿರುವ ಆರೋಪದ ಮೇಲೆ ಶೇಖ್ ಆದಿಲ್ ಮುಷ್ತಾಕ್ ಅವರನ್ನು ಬಂಧಿಸಲಾಗಿದ್ದು, ಭಯೋತ್ಪಾದಕರಿಗೆ ಸಹಾಯ ಮಾಡಿದ ಮತ್ತು ಸಹ ಪೊಲೀಸ್ ಅಧಿಕಾರಿಯನ್ನು ಬಲೆಗೆ ಬೀಳಿಸಲು ಯತ್ನಿಸಿದ ಆರೋಪ ಅವರ ಕೂಡ ಇವರ ಮೇಲಿದೆ ಎಂದರು.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.