ಬೆಂಗಳೂರು, ಸೆ 22 (DaijiworldNews/HR): ಕಾವೇರಿ ನೀರು ವಿಚಾರದಲ್ಲಿ ರಾಜ್ಯ ಸರ್ಕಾರ ಉಡಾಫೆಯಾಗಿ ನಡೆದುಕೊಳ್ಳುತ್ತಿದ್ದು ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಶನಿವಾರ ಬೃಹತ್ ಪ್ರತಿಭಟನೆ ಮಾಡುತ್ತೇವೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಬರ ಬಂದರೆ ಕೇಂದ್ರದ ಕಡೆ ತೋರಿಸುತ್ತಾರೆ. ರಾಜ್ಯ ಸರ್ಕಾರ ಪರಿಹಾರ ಕೊಡಬಾರದು ಎಂದು ಏನೂ ನಿಯಮ ಇಲ್ಲ. ನಾವು ಪ್ರವಾಹ ಬಂದಾಗ ಕೇಂದ್ರದ ಎರಡು ಪಟ್ಟು ಪರಿಹಾರ ಕೊಟ್ಟಿದ್ದೇವೆ ಎಂದರು.
ಇನ್ನು ಜನ ನಿಮಗೆ ಅಧಿಕಾರ ಕೊಟ್ಟಿದ್ದಾರೆ. ಆದರೆ ನೀವು ಜನರಿಗೆ ದ್ರೋಹ ಮಾಡಿದ್ದೀರಿ. ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಶನಿವಾರ ಪ್ರತಿಭಟನೆ ಮಾಡಲಾಗುವುದು ಎಂದಿದ್ದಾರೆ.