ಬೆಂಗಳೂರು,ಸೆ 25(DaijiworldNews/AK): ಮಳೆ ಅಭಾವದಿಂದ ನೀರಿಲ್ಲದೆ ರೈತರು ಕಂಗಾಗಲಾಗಿದ್ದರೆ. ಇದರ ಮಧ್ಯೆ ಕಾವೇರಿ ನದಿ ನೀರು ಪ್ರಾಧಿಕಾರ ಹಾಗೂ ಸುಪ್ರೀಂಕೋರ್ಟ್ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶಿಸಿದೆ.
ಇದರಿಂದ ಕಾವೇರಿ ಭಾಗದ ಜನ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದೆಲ್ಲೆಡೆ ಕಾವೇರಿ ಕಿಚ್ಚು ಜೋರಾಗಿದೆ.
ಇದರ ಮಧ್ಯೆ ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು, ಕಾವೇರಿ ನದಿ ನೀರು ವಿವಾದದ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.