ಬೆಂಗಳೂರು, ಸೆ 25 (DaijiworldNews/HR): ಬಂದ್-ಪ್ರತಿಭಟನೆ ಮಾಡುವ ರೈತರು ಮತ್ತು ಕನ್ನಡ ಹೋರಾಟಗಾರರ ಹಕ್ಕನ್ನೂ ನಾನು ಗೌರವಿಸುತ್ತೇನೆ. ಆದರೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ಶಾಂತಿಯುತವಾಗಿ ಪ್ರತಿಭಟನೆ ನಡೆಸಿ ಎಂದು ಮುಖ್ಯಮಂತ್ರಿ ಸಿದ್ದರಾಮ್ಯಯ ಮನವಿ ಮಾಡಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪ್ರತಿಕ್ರಿಯಿಸಿದ ಅವರು, ಕೆಲವು ರಾಜಕೀಯ ನಾಯಕರು ತಪ್ಪು ಮಾಹಿತಿ ಮೂಲಕ ಜನರನ್ನು ಪ್ರಚೋದಿಸುವ ಕೆಲಸವನ್ನೂ ಮಾಡುತ್ತಿರುವುದೂ ಸರ್ಕಾರದ ಗಮನಕ್ಕೆ ಬಂದಿದೆʼ ಎಂದದ್ದಾರೆ.
ಇನ್ನು ನಮ್ಮ ಪ್ರಜ್ಞಾವಂತ ರೈತ ಮತ್ತು ಕನ್ನಡ ಹೋರಾಟಗಾರರು ಇಂತಹ ರಾಜಕೀಯ ದುರುದ್ದೇಶಪೂರಿತ ಅಪಪ್ರಚಾರಕ್ಕೆ ಬಲಿಯಾಗದೆ ಬಂದ್ -ಪ್ರತಿಭಟನೆಯನ್ನು ಸಾರ್ವಜನಿಕರಿಗೆ ತೊಂದರೆಯಾಗದಂತೆ ಶಾಂತಿಯುತವಾಗಿ ನಡೆಸಬೇಕುʼ ಎಂದು ಮನವಿ ಮಾಡಿದ್ದಾರೆ.
ತಮಿಳುನಾಡು ರಾಜ್ಯ ಮೊದಲು ಪ್ರತಿದಿನ 24,000 ಕ್ಯುಸೆಕ್ ನೀರು ಹರಿಸುವಂತೆ ಬೇಡಿಕೆ ಸಲ್ಲಿಸಿತ್ತು, ನಾವು ನಿರಾಕರಿಸಿದ್ದ ಕಾರಣ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನಾವು ಬಿಡಬೇಕಾದ ನೀರಿನ ಪ್ರಮಾಣವನ್ನು 7,200 ಕ್ಯುಸೆಕ್ ಗೆ ಇಳಿಸಿತ್ತು. ನೀರಿನ ಕೊರತೆಯಿಂದಾಗಿ ಇಷ್ಟು ಪ್ರಮಾಣದ ನೀರನ್ನು ಬಿಡಲು ಸಾಧ್ಯವಿಲ್ಲ ಎಂದು ನಮ್ಮ ಅಧಿಕಾರಿಗಳು ವಾದಿಸಿದ ನಂತರ ಪ್ರತಿದಿನ 5,000 ಕ್ಯುಸೆಕ್ ನೀರು ಹರಿಸಬೇಕೆಂದು ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ನೀಡಿತ್ತು. ಇದೇ ಆದೇಶವನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಒಪ್ಪಿಕೊಂಡು ನಮಗೆ ನೀರು ಬಿಡಲು ಆದೇಶ ನೀಡಿತ್ತು ಎಂದು ತಿಳಿಸಿದ್ದಾರೆ.