ಬೆಂಗಳೂರು, ಸೆ. 30 (DaijiworldNews/HR): ಮುಂದಿನ ಆರು ತಿಂಗಳಲ್ಲಿ ಎಲ್ಲ ಇಲಾಖೆಗಳಲ್ಲಿ ಖಾಲಿಯಿರುವ ಬ್ಯಾಕ್ಲಾಗ್ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮೀಸಲಿಟ್ಟ ಹುದ್ದೆಗಳನ್ನು ಭರ್ತಿ ಮಾಡದಿರುವುದು ಸರಕಾರಿ ಸೇವೆಯಲ್ಲಿ ಆ ಸಮುದಾಯಗಳಿಗೆ ಕಲ್ಪಿಸಿದ ಪ್ರಾತಿನಿಧ್ಯ ಕಸಿದುಕೊಂಡಂತೆ ಎಂದು ಹೈಕೋರ್ಟ್ ಹೇಳಿದೆ.
ಇನ್ನು ಬೆಂಗಳೂರಿನ ಪಟ್ಟಂದೂರು ಅಗ್ರಹಾರದ ನಿವಾಸಿ ಎಂ.ಮಂಜುನಾಥ್ ಪ್ರಸಾದ್ ಎಂಬುವರು ಸಲ್ಲಿಸಿದ್ದ ಮೇಲ್ಮನವಿಯನ್ನು ಪುರಸ್ಕರಿಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ಈ ತೀರ್ಪು ನೀಡಿದೆ.