ನವದೆಹಲಿ, 02 (DaijiworldNews/HR): ಮೆಟಾ ಒಡೆತನದ ವಾಟ್ಸ್ಆ್ಯಪ್ ಬರೋಬ್ಬರಿ 74 ಲಕ್ಷಕ್ಕೂ ಅಧಿಕ ಭಾರತೀಯರ ಖಾತೆಗಳನ್ನು ನಿರ್ಬಂಧಿಸಿದೆ ಎಂದು ವರದಿಯಾಗಿದೆ.
ಆಗಸ್ಟ್ 01-31ರ ಅವಧಿಯಲ್ಲಿ ವಾಟ್ಸ್ಆ್ಯಪ್ ನಲ್ಲಿ ಅನೇಕ ದೂರುಗಳನ್ನು ಸ್ವೀಕರಿಸಲಾಗಿದ್ದು, ವಾಟ್ಸ್ಆ್ಯಪ್ ಸೇವಾ ಷರತ್ತುಗಳ ಉಲ್ಲಂಘನೆ ಮತ್ತು ಬಳಕೆದಾರರ ದೂರುಗಳನ್ನು ಆಧರಿಸಿ 7,420,748 ವಾಟ್ಸ್ಆ್ಯಪ್ ಖಾತೆಗಳನ್ನು ಬ್ಯಾನ್ ಮಾಡಲಾಗಿದೆ ಎಂದು ಮೆಟಾ ತಿಳಿಸಿದೆ.
ಇನ್ನು ಈ ಹಿಂದೆ ಜುಲೈ ತಿಂಗಳಲ್ಲಿ ಕೂಡ 72 ಲಕ್ಷಕ್ಕೂ ಅಧಿಕ ಭಾರತೀಯರ ಖಾತೆಗಳನ್ನು ನಿಷೇಧಿಸಲಾಗಿತ್ತು.
500 ಮಿಲಿಯನ್ ಬಳಕೆದಾರರನ್ನು ಹೊಂದಿರುವ ಈ ಆ್ಯಪ್ ಕೇವಲ ಆಗಸ್ಟ್ ತಿಂಗಳಿನಲ್ಲಿ ಭಾರತೀಯ ಗ್ರಾಹಕರಿಂದ 14,767 ದೂರು ವರದಿಗಳನ್ನು ಸ್ವೀಕರಿಸಿದೆ. ಇವುಗಳಲ್ಲಿ 71 ವರದಿಗಳಿಗೆ ಪ್ರತಿಕ್ರಿಯೆಯಾಗಿ ಬ್ಯಾನ್ ಮಾಡಲಾಗಿದೆ.