ಬೆಂಗಳೂರು, ಅ 02 (DaijiworldNews/AK): ಗ್ರಾಮ ನ್ಯಾಯಾಲಯಗಳ ಸ್ಥಾಪನೆ ಗ್ರಾಮಗಳ ವ್ಯಾಜ್ಯಗಳು ಗ್ರಾಮಗಳಲ್ಲೇ ಬಗೆಹರಿಯಬೇಕು ಎನ್ನುವ ಮಹತ್ವಾಕಾಂಕ್ಷೆಯಿಂದ ಗ್ರಾಮ ನ್ಯಾಯಾಲಯಗಳನ್ನು ಸ್ಥಾಪಿಸುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ 2023 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಸ್ವಚ್ಚ ಸರ್ವೇಕ್ಷಣಾ ಗ್ರಾಮೀಣ ರಾಜ್ಯ ಮಟ್ಟದ ಪ್ರಶಸ್ತಿ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರಶಸ್ತಿ ವಿತರಸಿ ಮಾತನಾಡಿದ ಅವರು, .
ಮಹಾತ್ಮಗಾಂಧಿ ಮತ್ತು ರಾಜೀವ್ ಗಾಂಧಿ ಅವರ ಗ್ರಾಮ ಸ್ವರಾಜ್ಯ ಮತ್ತು ಅಧಿಕಾರ ವಿಕೇಂದ್ರೀಕರಣ ಆಶಯದಂತೆ ಗ್ರಾಮ ನ್ಯಾಯಾಲಯಗಳ ಸ್ಥಾಪನೆಯಾದರೆ ಗ್ರಾಮಸ್ಥರಿಗೆ ಬಹಳ ಅನುಕೂಲ ಆಗುತ್ತದೆ ಎಂದು ತಿಳಿಸಿದರು.
ಅಧಿಕಾರ ವಿಕೇಂದ್ರಕರಣ ಗಾಂಧಿಯವರ ಕನಸಾಗಿತ್ತು. ಇದರಿಂದ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ. ದೇಶ, ರಾಜ್ಯದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ನಂಬಿದ್ದರು. ಹೀಗಾಗಿ ಗ್ರಾಮ ಸ್ವರಾಜ್ಯವನ್ನು ಪ್ರತಿಪಾದಿಸಿದರು ಎಂದರು.