ಅ 07 (DaijiworldNews/HR): ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರಗ್ಸ್ ನಿಗ್ರಹ ದಳದ ಅಧಿಕಾರಿಗಳು ನವದೀಪ್ ಗೆ ನೋಟಿಸ್ ಜಾರಿ ಮಾಡಿದ್ದು, ಇದೀಗ ಜಾರಿ ನಿರ್ದೇಶನಾಲಯ (ಇಡಿ) ಅಕ್ಟೋಬರ್ 10ರಂದು ವಿಚಾರಣೆಗೆ ಬರುವಂತೆ ನೋಟಿಸ್ ನೀಡಿದೆ.
ಮಾದಾಪುರ ಡ್ರಗ್ಸ್ ಕೇಸ್ ನ 37ನೇ ಆರೋಪಿ ಆಗಿದ್ದ ನವದೀಪ್ ಬಂಧನಕ್ಕೆ ಅಧಿಕಾರಿಗಳು ಬಲೆ ಬೀಸಿದ್ದು, ಈ ವಿಷಯ ತಿಳಿಯುತ್ತಿದ್ದಂತೆಯೇ ಈಗಾಗಲೇ ವಿಚಾರಣೆಗೂ ಒಳಗಾಗಿರುವ ನವದೀಪ್ ತಲೆಮರೆಸಿಕೊಂಡಿದ್ದರು.
ಇನ್ನು ಜೊತೆಗೆ ತೆಲಂಗಾಣ ಹೈಕೋರ್ಟಿಗೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಕೂಡ ಸಲ್ಲಿದ್ದರು.
ಜಾಮೀನು ಅರ್ಜಿಯನ್ನು ಕೈಗೆತ್ತಿಕೊಂಡಿದ್ದ ಮಾನ್ಯ ತೆಲಂಗಾಣ ಉಚ್ಛ ನ್ಯಾಯಾಲಯವು ಬಲವಂತವಾಗಿ ನವದೀಪ್ ಅವರನ್ನು ಬಂಧಿಸುವಂತಿಲ್ಲ ಎಂದು ಆದೇಶ ನೀಡಿದೆ.
ಈ ಹಿಂದೆ ಹೋಟೆಲ್ ವೊಂದರ ಮೇಲೆ ದಾಳಿ ಮಾಡಿದ್ದ ಅಧಿಕಾರಿಗಳು ನಿರ್ಮಾಪಕನೂ ಸೇರಿದಂತೆ ಹಲವರನ್ನು ಬಂಧಿಸಿದ್ದು ಈ ವೇಳೆ ನವದೀಪ್ ಕೂಡ ಇದ್ದಾರೆ ಎಂದು ಹೇಳಲಾಗಿತ್ತು.