ಬೆಂಗಳೂರು, ಅ 08 (DaijiworldNews/HR): ಕರ್ನಾಟಕದಲ್ಲಿ ಒಂದೂವರೆ ತಿಂಗಳಲ್ಲಿ ಎರಡನೇ ಪಟಾಕಿ ದುರಂತ ನಡೆದಿದ್ದು, ಹಾವೇರಿ ಮತ್ತು ಅತ್ತಿಬೆಲೆ ದುರಂತಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಅತ್ತಿಬೆಲೆ ಪಟಾಕಿ ದುರಂತ ಪ್ರಕರಣ ಕುರಿತು ಮಾತನಾಡಿದ ಅವರು, ಅತ್ತಿಬೆಲೆ ಪಟಾಕಿ ದುರಂತದಲ್ಲಿ 14 ಜನ ಮೃತಪಟ್ಟಿದ್ದಾರೆ, ಇದು ಆಘಾತಕಾರಿ ವಿಚಾರವಾಗಿದೆ. ಸರ್ಕಾರ ಘೋಷಣೆ ಮಾಡಿರುವ ಪರಿಹಾರವನ್ನು ಶೀಘ್ರವೇ ಬಿಡುಗಡೆ ಮಾಡಲಿ ಎಂದು ಆಗ್ರಹಿಸಿದ್ದಾರೆ.
ಇನ್ನು ಗಾಯಾಳುಗಳಿಗೆ ಸರ್ಕಾರ ಉತ್ತಮ ಚಿಕಿತ್ಸೆ ಕೊಡಿಸಬೇಕು. ಹಾವೇರಿಯಲ್ಲೂ ಪಟಾಕಿ ದುರಂತ ಆಗಿತ್ತು. ಕಾನೂನಿನಲ್ಲಿ ಪಟಾಕಿಗಳ ಇಷ್ಟೊಂದು ಪ್ರಮಾಣದ ಶೇಖರಣೆಗೆ ಅವಕಾಶ ಇಲ್ಲ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಆಗಬೇಕು ಎಂದು ಒತ್ತಾಯಿಸಿದ್ದಾರೆ.