ಹೈದರಾಬಾದ್, ಅ 09 (DaijiworldNews/HR): ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಹಾಗೂ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ಸಲ್ಲಿಸಿದ್ದ ಮೂರು ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ಆಂಧ್ರಪ್ರದೇಶ ಹೈಕೋರ್ಟ್ ವಜಾಗೊಳಿಸಿದೆ.
ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 9 ರಂದು ಚಂದ್ರಬಾಬು ನಾಯ್ಡು ಅವರು ಬಂಧಿಸಲ್ಪಟ್ಟ ನಂತರ ಅಮರಾವತಿ ಇನ್ನರ್ ರಿಂಗ್ ರೋಡ್, ಫೈಬರ್ ನೆಟ್ ಮತ್ತು ಅಂಗಲ್ಲು ಹಿಂಸಾಚಾರ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ಸಲ್ಲಿಸಿದ್ದರು.
ಇನ್ನು ಕೌಶಲ್ಯಾಭಿವೃದ್ಧಿ ಹಗರಣ ಪ್ರಕರಣದಲ್ಲಿ ಅವರ ಜಾಮೀನು ಅರ್ಜಿಯನ್ನು ಡೀಮ್ಡ್ ಕಸ್ಟಡಿ ಆಧಾರದ ಮೇಲೆ ತಿರಸ್ಕರಿಸಲಾಗಿದೆ. ಇನ್ನರ್ ರಿಂಗ್ ರೋಡ್ ಪ್ರಕರಣದಲ್ಲಿ, ನ್ಯಾಯಾಲಯವು ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದು ತನಿಖೆ ಆರಂಭಿಕ ಹಂತದಲ್ಲಿದೆ ಎಂದು ಹೇಳಿದ್ದಾರೆ.