ನವದೆಹಲಿ, ಅ 17 (DaijiworldNews/HR): ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಎಎಪಿ ನಾಯಕ ಮನೀಷ್ ಸಿಸೋಡಿಯಾ ಅವರನ್ನು ಅನಿರ್ದಿಷ್ಟ ಅವಧಿಗೆ ಕಾರಾಗೃಹದಲ್ಲಿ ಇರಿಸಲು ಸಾಧ್ಯವಿಲ್ಲ ಎಂದು ಸಿಬಿಐ ಹಾಗೂ ಜಾರಿ ನಿರ್ದೇಶನಾಲಯಕ್ಕೆ ಸುಪ್ರೀಂ ಕೋರ್ಟ್ ತಿಳಿಸಿದೆ.
ಸಿಸೋಡಿಯಾ ವಿರುದ್ಧ ಆರೋಪಗಳ ಕುರಿತವಾದ ವಿಚಾರಣಾ ನ್ಯಾಯಾಲಯದಲ್ಲಿ ಯಾವಾಗ ನಡೆಯಲಿದೆ ಎಂದು ಎರಡು ತನಿಖಾ ಸಂಸ್ಥೆಗಳ ಪರವಾಗಿ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು ಅವರಲ್ಲಿ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಹಾಗೂ ಎಸ್.ವಿ.ಎನ್. ಭಟ್ಟಿ ಅವರನ್ನು ಒಳಗೊಂಡ ಪೀಠ ಪ್ರಶ್ನಿಸಿದೆ.
ಇನ್ನು ನೀವು ಅವರನ್ನು ಅನಿರ್ದಿಷ್ಟ ಅವಧಿ ಕಂಬಿಯ ಹಿಂದೆ ಇರಿಸಲು ಸಾಧ್ಯವಿಲ್ಲ. ಪ್ರಕರಣಕ್ಕೆ ಸಂಬಂಧಿಸಿ ಒಮ್ಮೆ ಆರೋಪ ಪಟ್ಟಿ ಸಲ್ಲಿಸಿದ ಬಳಿಕ ಆರೋಪದ ಕುರಿತ ವಾದವನ್ನು ಕೂಡಲೇ ನಡೆಸಬೇಕು ಎಂದು ರಾಜು ಅವರಿಗೆ ಸುಪ್ರೀಂ ಕೋರ್ಟ್ ಹೇಳಿದೆ.