ಬೆಂಗಳೂರು, ಅ 20 (DaijiworldNews/HR): ಕರ್ನಾಟಕದಲ್ಲಿ ಎರಡೂವರೆ ವರ್ಷದ ಮೇಲೆ ಸಚಿವ ಸಂಪುಟ ಬದಲಾವಣೆ ಆಗಲಿದೆ ಎಂದು ಸರ್ಕಾರದ ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಅವರು ಹೊಸ ಬಾಂಬ್ ಸಿಡಿಸಿದ್ದಾರೆ.
ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಅವರು, ಮಂತ್ರಿಸ್ಥಾನವನ್ನು ಈಗ ಎಲ್ಲರಿಗೂ ನೀಡಲು ಸಾಧ್ಯವಿಲ್ಲ. ಹೀಗಾಗಿ ಎರಡೂವರೆ ವರ್ಷದ ಬಳಿಕ ನೀಡುವುದಾಗಿ ಸುರ್ಜೇವಾಲ ಸೇರಿದಂತೆ ಎಲ್ಲಾ ಕಾಂಗ್ರೆಸ್ ನಾಯಕರು ಹೇಳಿದ್ದಾರೆ ಎಂದರು.
ಇನ್ನು ನನಗೂ ಮಂತ್ರಿ ಸ್ಥಾನ ಸಿಗಬೇಕಿತ್ತು. ಆದರೆ ಜಾತಿ ನೋಡಿ ಮಂತ್ರಿ ಮಾಡಿದ ಕಾರಣ ನನಗೆ ಸಿಕ್ಕಿಲ್ಲ. ಜಾತಿ ನೋಡಿ ಮಂತ್ರಿ ಸ್ಥಾನ ಕೊಡಬೇಡಿ. ಸೀನಿಯರ್, ಅನುಭವ ನೋಡಿ ಮಂತ್ರಿ ಮಾಡಿ ಎಂದು ನಮ್ಮ ನಾಯಕರಿಗೆ ಮನವಿ ಮಾಡಿದ್ದೇನೆ ಎಂದಿದ್ದಾರೆ.