ಬೆಂಗಳೂರು, ಅ 23 (DaijiworldNews/HR): ಕರ್ನಾಟಕದ ಬಿಜೆಪಿಯಲ್ಲಿ ಯಾರೇ ರಾಜ್ಯಾಧ್ಯಕ್ಷ ಆದರೂ ಸಂತಸ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, 5 ತಿಂಗಳಾದ್ರೂ ವಿರೋಧ ಪಕ್ಷದ ನಾಯಕರ ಆಯ್ಕೆಯಾಗಿಲ್ಲ. ಹಾಗಾಗಿ ಭಾರತೀಯ ಜನತಾ ಪಾರ್ಟಿಯಲ್ಲಿ ಯಾರೇ ಆದರೂ ಸಂತಸ ಎಂದರು.
ಇನ್ನು ನಿಗಮ ಮಂಡಳಿ ನೇಮಕ ವಿಚಾರವಾಗಿ ಮಾತನಾಡಿದ ಅವರು, ಹಬ್ಬ ಮುಗಿದ ಬಳಿಕ ಈ ಬಗ್ಗೆ ಚರ್ಚಿಸುತ್ತೇವೆ. ನಾನು, ಸಿಎಂ ಸಿದ್ದರಾಮಯ್ಯ ಕೂತು ನಿಗಮ ಮಂಡಳಿ ನೇಮಕ ಬಗ್ಗೆ ಮಾತನಾಡುತ್ತೇವೆ ಎಂದು ಹೇಳಿದ್ದಾರೆ.