ಮೈಸೂರು, ಅ 25 (DaijiworldNews/AK):ಕುಮಾರಸ್ವಾಮಿ ಸಿಎಂ ಆದವರು ಪ್ರಜ್ಞಾವಂತರು ಅಂದುಕೊಂಡಿದ್ದೆ. ಅವರಿಗೆ ಕಾಮನ್ ಸೆನ್ಸ್ ಇಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೆಚ್ಡಿಕೆಗೆ ತಿರುಗೇಟು ನೀಡಿದ್ದಾರೆ.
ಡಿ.ಕೆ ಶಿವಕುಮಾರ್ ಅವರು ಕನಕಪುರವನ್ನು ಬೆಂಗಳೂರು ಜಿಲ್ಲೆಗೆ ಸೇರಿಸೋ ಕುರಿತು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ತೀವ್ರ ವಿರೋಧಿಸಿದ್ದಾರೆ. ಅಲ್ಲದೇ ಡಿಕೆ ಶಿವಕುಮಾರ್ ಈ ನಿರ್ಧಾರದ ಹಿಂದೆ ಬೇನಾಮಿ ಆಸ್ತಿ ಎಂದು ಆರೋಪಿಸಿದ್ದರು. ಇದಕ್ಕೆ ಡಿಕೆಶಿ, ಕುಮಾರಸ್ವಾಮಿ ಅವರು ಸಿಎಂ ಆದವರು ಪ್ರಜ್ಞಾವಂತರು ಅಂದುಕೊಂಡಿದ್ದೆ. ಆದ್ರೆ, ಅವರಿಗೆ ಕಾಮನ್ ಸೆನ್ಸ್ ಇಲ್ಲ ಎಂದು ತಿರುಗೇಟು ನೀಡಿದ್ದಾರೆ. ಜೊತೆಗೆ ಕನಕಪುರ ಕ್ಷೇತ್ರವನ್ನ ಬೆಂಗಳೂರಿಗೆ ಸೇರಿಸುವ ವಿಚಾರಕ್ಕೆ ಸಮರ್ಥನೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಕುಮಾರಸ್ವಾಮಿ ಅವರು ಸಿಎಂ ಆದವರು ಪ್ರಜ್ಞಾವಂತರು ಅಂದುಕೊಂಡಿದ್ದೆ. ಆದ್ರೆ, ಅವರಿಗೆ ಕಾಮನ್ ಸೆನ್ಸ್ ಇಲ್ಲ ಎಂದು ತಿರುಗೇಟು ನೀಡಿದ್ದಾರೆ. ಜೊತೆಗೆ ಕನಕಪುರ ಕ್ಷೇತ್ರವನ್ನ ಬೆಂಗಳೂರಿಗೆ ಸೇರಿಸುವ ವಿಚಾರಕ್ಕೆ ಸಮರ್ಥಿಸಿಕೊಂಡಿದ್ದಾರೆ.
ರಾಮನಗರ, ಮಾಗಡಿ, ಚನ್ನಪಟ್ಟಣ, ಕನಕಪುರ ಜನ ಆಸ್ತಿಗಳನ್ನ ಮಾರಬೇಡಿ. ತಮ್ಮ ಭೂಮಿಗಳನ್ನು ಮಾರಿಕೊಂಡು ಹೋಗದಂತೆ ಜನತೆಗೆ ಹೇಳಿದ್ದೇನೆ. ಮುಂದಿನ ದಿನಗಳಲ್ಲಿ ಭೂಮಿಗೆ ಒಳ್ಳೆಯ ಬೆಲೆ ಬರಲಿದೆ ಎಂದು ಹೇಳಿದ್ದೇನೆ. ರಾಮನಗರ ಜಿಲ್ಲೆಯ ಅನೇಕ ನಾಯಕರು ಉನ್ನತ ಸ್ಥಾನಗಳಲ್ಲಿ ಕೆಲಸ ಮಾಡಿದ್ದಾರೆ. ಅವರೆಲ್ಲ ಬೆಂಗಳೂರು ವ್ಯಾಪ್ತಿಯ ರಾಮನಗರದವರು.ಇದರ ಇತಿಹಾಸ, ದಾಖಲೆಗಳನ್ನ ಕುಮಾರಸ್ವಾಮಿ ಒಮ್ಮೆ ಓದಿಕೊಳ್ಳಬೇಕು ಎಂದು ತಿರುಗೇಟು ನೀಡಿದ್ದಾರೆ.
ಕುಮಾರಸ್ವಾಮಿ ಏನೇನೋ ಹೇಳುತ್ತಾರೆ ಅದಕ್ಕೆ ನಾನು ತಲೆ ಕೆಡಿಸಿಕೊಳ್ಳಲ್ಲ. ನನ್ನ ತಲೆಯಲ್ಲಿ ಏನೋ ಯೋಚನೆ ಇದೆ ಅದನ್ನ ಏನು ಮಾಡುತ್ತೇನೆ ಎನ್ನುವುದೇ ಮುಖ್ಯ ಎಂದಿದ್ದಾರೆ.