ಹುಬ್ಬಳ್ಳಿ, ಅ 25 (DaijiworldNews/Ak): ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬರೀ ಹೆಸರು ಕೇಳಿ ಬರೋದೆ ಆಯಿತು. ಅಧ್ಯಕ್ಷರು ಯಾರು ಅಂತ ಬಹಿರಂಗಪಡಿಸಲಿ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸವಾಲು ಹಾಕಿದರು.
ಸುದ್ದಿಗಾರರೊಂದಿಗೆ ಮಾತನಾಡಿ ಅವರು, ದೆಹಲಿ ವರಿಷ್ಠರು ಒಂದು ಹೆಸರು ಬಿಟ್ಟು ಅದರ ಪ್ಲಸ್, ಮೈನಸ್ ನೋಡಿ ಪ್ರಯೋಗ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಅಧ್ಯಕ್ಷ ಸ್ಥಾನದ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಇದು ಊಹಾಪೋಹವಷ್ಟೇ.ರಾಜ್ಯಾಧ್ಯಕ್ಷ, ವಿಧಾನಸಭೆ ವಿಪಕ್ಷ ನಾಯಕನ ಆಯ್ಕೆ ಮಾಡದ ಶೋಚನಿಯ ಪರಿಸ್ಥಿತಿ ಬಿಜೆಪಿಗೆ ಬಂದಿದೆ. ಇದನ್ನು ಜನ ಅರ್ಥ ಮಾಡಿಕೊಂಡಿದ್ದಾರೆ.
ಸಂಕ್ರಾಂತಿ ಬಳಿಕ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಆಗುತ್ತೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಆದರೆ ಕಾಂಗ್ರೆಸ್ ಸರ್ಕಾರಕ್ಕೆ ಏನು ಆಗುವುದಿಲ್ಲ. ಈ ಸರ್ಕಾರ ಗಟ್ಟಿಮುಟ್ಟಾಗಿ ಐದು ವರ್ಷ ಇರುತ್ತದೆ ಎಂದು ಹೇಳಿದರು.
ಆದರೆ ಸಂಕ್ರಾಂತಿ ನಂತರ ಅಲ್ಲೋಲ ಕಲ್ಲೋಲ ಆಗುತ್ತೆ ಎಂದು ಆಶಾಭಾವನೆ ಮೂಡಿಸಿ ಕಾರ್ಯಕರ್ತರನ್ನು, ಪಕ್ಷ ಬಿಟ್ಟು ಹೋಗುತ್ತಿರುವ ನಾಯಕರನ್ನು ಹಿಡಿದಿಟ್ಟುಕೊಳ್ಳುವ ಪ್ರಯತ್ನ ಬಿಜೆಪಿ ಮಾಡುತ್ತಿದೆ ಎಂದರು.