ಬೆಂಗಳೂರು, ಅ 27 (DaijiworldNews/MS): ಹುಲಿ ಉಗುರಿನ ಲಾಕೆಟ್ ಪೆಂಡೆಂಟ್ ರಾಜ್ಯಾದ್ಯಂತ ಚರ್ಚೆಯ ಬೆನ್ನಲ್ಲೇ , "ಯಾವುದೇ ಧರ್ಮಕ್ಕೆ ಸೇರಿದರೂ ಕಾನೂನು ಒಂದೇ" ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
'ಹುಲಿ ಉಗುರು ಕೇಸ್ನಲ್ಲಿ ಹಿಂದೂಗಳ ಟಾರ್ಗೆಟ್ ಮಾಡಲಾಗ್ತಿದೆ' ಎಂಬ ಅರವಿಂದ ಬೆಲ್ಲದ್ ಆರೋಪಕ್ಕೆ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ಯಾವುದೇ ಧರ್ಮಕ್ಕೆ ಸೇರಿದರೂ ಕಾನೂನು ಒಂದೇ. ಕಾನೂನಿನಡಿ ಕ್ರಮ ತೆಗೆದುಕೊಳ್ತೇವೆಂದು ಅರಣ್ಯ ಸಚಿವರೇ ಹೇಳಿದ್ದಾರೆ. ವನ್ಯಜೀವಿಗಳ ಚರ್ಮ ಹುಲಿಯ ಉಗುರು ಧರಿಸುವುದು ಕಾನೂನು ಉಲ್ಲಂಘನೆಯಾಗಿದ್ದು, 1972ರ ವನ್ಯಜೀವಿಗಳ ಸಂರಕ್ಷಣಾ ಕಾಯ್ದೆ ಉಲ್ಲಂಘನೆ ಆಗುತ್ತದೆ . ವನ್ಯಜೀವಿಗಳ ಚರ್ಮ ಉಗುರು ಬಳಕೆ ಮಾಡುವುದು ನಿಷೇಧವಿದೆ ಎಂದು ಹೇಳಿದ್ದಾರೆ.