ಬೆಂಗಳೂರು, ಅ 27 (DaijiworldNews/AK):ಹುಲಿ ಉಗುರು ಲಾಕೆಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ವರ್ತೂರು ಸಂತೋಷ್ಗೆ ಜಾಮೀನು ಮಂಜೂರು ಮಾಡಲಾಗಿದೆ.
2ನೇ ಎಸಿಜೆಎಂ ನ್ಯಾಯಾಲಯವು 4 ಸಾವಿರ ನಗದು ಶ್ಯೂರಿಟಿ ಅಥವಾ ಒಬ್ಬ ವ್ಯಕ್ತಿಯ ಶ್ಯೂರಿಟಿ, ತನಿಖಾಧಿಕಾರಿಗಳು ಸೂಚಿಸಿದಾಗ ವಿಚಾರಣೆಗೆ ಹಾಜರಾಗಬೇಕು ಎಂದು ಷರತ್ತು ವಿಧಿಸಿ ಜಮೀನು ನೀಡಲಾಗಿದೆ
ಜಾಮೀನು ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಸಂತೋಷ್ ಇಂದು ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ.ಹಳ್ಳಿಕಾರ್ ರಾಸುಗಳ ರಕ್ಷಣೆಯ ಮೂಲಕ ಗುರುತಿಸಿಕೊಂಡಿದ್ದ ಸಂತೋಷ್ ಅವರು 10ನೇ ಅವೃತ್ತಿಯ ಬಿಗ್ ಬಾಸ್ ಮನೆಗೆ ಸ್ಪರ್ಧಿಯಾಗಿ ಪ್ರವೇಶ ಮಾಡಿದ್ದರು.
ಸಂತೋಷ್ ಕುತ್ತಿಗೆಯಲ್ಲಿ ಹುಲಿಯ ಉಗುರು ಇರುವ ಪೆಂಡೆಂಟ್ ಹಾಕಿಕೊಂಡಿದ್ದರು. ಈ ಕಾರಣಕ್ಕೆ ಬಿಗ್ ಬಾಸ್ ಮನೆಯಲ್ಲಿದ್ದಾಗ ರಾಮೋಹಳ್ಳಿ ಅರಣ್ಯಾಧಿಕಾರಿಗಳು ಸಂತೋಷ್ ಅವರನ್ನು ಬಂಧಿಸಿದ್ದರು.