ನವದೆಹಲಿ, ಅ 28 (DaijiworldNews/HR): ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರಿಗೆ ಇ-ಮೇಲ್ ಮೂಲಕ ಜೀವ ಬೆದರಿಕೆ ಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪರಿಚಿತ ವ್ಯಕ್ತಿಯೊಬ್ಬ ಮುಖೇಶ್ ಅಂಬಾನಿ ಅವರ ಕಂಪನಿಯ ಇಮೇಲ್ ಐಡಿಗೆ ಕಳುಹಿಸಿರುವ ಇ-ಮೇಲ್ನಲ್ಲಿ ಕೋಟ್ಯಾಧಿಪತಿ 20 ಕೋಟಿ ನೀಡಬೇಕು ಇಲ್ಲವಾದಲ್ಲಿ ಆತನನ್ನು ಹತ್ಯೆ ಮಾಡಲಾಗುವುದು ಎಂದು ಹೇಳಲಾಗಿದೆ.
ಇನ್ನು ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರಿಗೆ ಇ-ಮೇಲ್ ಮೂಲಕ ಕೊಲೆ ಬೆದರಿಕೆ ಹಾಕಿದ್ದು ಅದರಲ್ಲಿ 20 ಕೋಟಿ ರೂಪಾಯಿ ನೀಡುವಂತೆ ಕೇಳಲಾಗಿದೆ.
ಮುಕೇಶ್ ಅಂಬಾನಿ ಅವರ ಭದ್ರತಾ ಉಸ್ತುವಾರಿ ನೀಡಿದ ದೂರಿನ ಆಧಾರದ ಮೇಲೆ ಮುಂಬೈನ ಗಾಮ್ದೇವಿ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.