ಬೆಳಗಾವಿ,ಅ 30 (DaijiworldNews/AK): ಅತೀ ಶೀಘ್ರದಲ್ಲಿ ಡಿಕೆ ಶಿವಕುಮಾರ್ ಮಾಜಿ ಮಂತ್ರಿ ಆಗಲಿದ್ದಾರೆ ಎಂದು ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಹಾಕಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಮತ್ತೆ ಆಪರೇಷನ್ ಕಮಲಕ್ಕೆ ಕೈ ಹಾಕಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾಡಿರುವ ಗಂಭೀರ ಆರೋಪಕ್ಕೆ ಕಿಡಿಕಾರಿದ್ದರೆ. ಡಿ.ಕೆ.ಶಿವಕುಮಾರ್ ನಾಟಕ ಮಂಡಳಿ ಬಿಜೆಪಿ ಹೆಸರು ಕೆಡಿಸುತ್ತಿದೆ. ಡಿಕೆ ಆ್ಯಂಡ್ ಕಂಪನಿ ಆಪರೇಷನ್ ಕಮಲ ಮಾಡುತ್ತಿದ್ದಾರೆ ಅಂತಿದ್ದಾರೆ ಎಂದರು.
ಅನಿವಾರ್ಯ ಕಾರಣದಿಂದ 2019ರಲ್ಲಿ ಆಪರೇಷನ್ ಮಾಡಿದ್ದೆವು. ಡಿಕೆ ಶಿವಕುಮಾರ್ ಸರ್ವಾಧಿಕಾರಿ ಧೋರಣೆ, ಸೊಕ್ಕಿನಿಂದ ಸರ್ಕಾರ ಕೆಡವಿದ್ದೆವು. ಗ್ಯಾರಂಟಿ ಈಡೇರಿಸಲು ಆಗದಿದ್ದಕ್ಕೆ ಆಪರೇಷನ್ ಕಮಲ ಆರೋಪ ಮಾಡುತ್ತಿದ್ದಾರೆ. 2019ರಲ್ಲಿ ಅನಿವಾರ್ಯ ಇದ್ದಿದ್ದರಿಂದ ಆಪರೇಷನ್ ಮಾಡಿದ್ದೆವು. ಏನೇ ಇದ್ದರೂ ದಾಖಲೆ ಬಿಡುಗಡೆ ಮಾಡಲಿ ಎಂದು ಡಿಕೆ ಶಿವಕುಮಾರ್ ವಿರುದ್ಧ ಆಕ್ರೋಶ ಹೊರಹಾಕಿದ್ದರು.
ಜಗದೀಶ್ ಶೆಟ್ಟರ್ ಭೇಟಿಯನ್ನು ಒಪ್ಪಿಕೊಂಡ ಅವರು, ಶೆಟ್ಟರ್ ಸರಿಯಾದ ಸಮಯಕ್ಕೆ ಸರಿಯಾದ ನಿರ್ಣಯ ತೆಗೆದುಕೊಳ್ಳುತ್ತಾರೆ ಎಂದು ಹೇಳಿರುವುದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ.
ಸಿಡಿ ಮಾಸ್ಟರ್ ಡಿಕೆ ಶಿವಕುಮಾರ್, ಎಲ್ಲರ ಸಿಡಿ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡುತ್ತಾನೆ. ಅವನೇನೂ ದೊಡ್ಡವನಲ್ಲ. ಧೈರ್ಯಶಾಲಿ ಅಲ್ಲ ಪುಕ್ಕಲು. ಡಿಕೆ ಶಿವಕುಮಾರ್ ಯಾವಾಗಲೂ ಮೋಸಗಾ ಎಂದು ವಾಗ್ದಾಳಿ ನಡೆಸಿದ್ದಾರೆ. ಎಷ್ಟೇ ಸಿಡಿ ಬಂದರೂ ನಾನು ಹೆದರಲ್ಲ ಎಂದು ಡಿಕೆಶಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದರು.