ಉತ್ತರ ಪ್ರದೇಶ, ಅ 31 (DaijiworldNews/MR/AK):ಭೈರೋನ್ನ ಬಿಜೆಪಿ ಮಾಜಿ ಸಂಸದ ಪ್ರಸಾದ್ ಮಿಶ್ರಾ ಅವರ ಪುತ್ರ ಆಸ್ಪತ್ರೆಯಲ್ಲಿ ಹಾಸಿಗೆಗಳ ಕೊರತೆಯಿಂದ ಸ್ಟ್ರೆಚರ್ನಲ್ಲಿಯೇ ಮಲಗಿ ಪ್ರಾಣಬಿಟ್ಟ ಘಟನೆ ನಡೆದಿದೆ.
ಲಕ್ನೋದ ಸಂಜಯ್ ಗಾಂಧಿ ಪೋಸ್ಟ್ ಗ್ರಾಜುಯೇಟ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ನಲ್ಲಿ ಸಮಯಕ್ಕೆ ಸರಿಯಾಗಿ ವೈದ್ಯರು ಸ್ಪಂದಿಸದ ಕಾರಣ ಮಾಜಿ ಸಂಸದರ ಮಗ ಸಾವನ್ನಪ್ಪಿದ್ದಾರೆ.
ಪ್ರಸಾದ್ ಮಿಶ್ರಾ ಅವರು ಶನಿವಾರ ರಾತ್ರಿ 11 ಗಂಟೆಗೆ ತಮ್ಮ ಮಗ ಪ್ರಕಾಶ್ ಮಿಶ್ರಾ ಅವರನ್ನು ಆಸ್ಪತ್ರೆಯ ತುರ್ತು ವಿಭಾಗಕ್ಕೆ ಕರೆತಂದರು.
ಪ್ರಕಾಶ್ ಅವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು, ಅವರ ಆರೋಗ್ಯ ತೀರಾ ಹದಗೆಟ್ಟಿತ್ತು.
ಆಗ ಕರ್ತವ್ಯದಲ್ಲಿದ್ದ ಸಿಬ್ಬಂದಿ ಆಸ್ಪತ್ರೆಯಲ್ಲಿ ಹಾಸಿಗೆಗಳ ಕೊರತೆ ಇದೆ, ನಿಮ್ಮ ಮಗನಿಗೆ ಚಿಕಿತ್ಸೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದರು. ಬಳಿಕ ಅವರನ್ನು ಸ್ಟ್ರೆಚರ್ನಲ್ಲಿಯೇ ಮಲಗಿಸಿ ಚಿಕಿತ್ಸೆ ನೀಡುವಂತೆ ಕೇಳಲಾಯಿತು, ಆಗಲೇ ಪ್ರಕಾಶ್ಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಅವರ ಆರೋಗ್ಯವನ್ನು ಸ್ಥಿರಗೊಳಿಸಲು ಯಾವುದೇ ಸೌಕರ್ಯಗಳನ್ನು ಒದಗಿಸಲಾಗಿಲ್ಲ. ಒಂದು ಗಂಟೆಯ ಬಳಿಕ ಪ್ರಕಾಶ್ ಸಾವನ್ನಪ್ಪಿದ್ದಾರೆ.
ಹೀಗಾಗಿ ಉತ್ತರ ಪ್ರದೇಶದ ಆಸ್ಪತ್ರೆಗಳಲ್ಲಿ ವಿಐಪಿಗಳಿಗೆ ಇಂತಹ ಗತಿ ಬಂದರೆ ಸಾಮಾನ್ಯ ಜನರ ಪಾಡೇನು ಎನ್ನುವ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ.