ಶಿವಮೊಗ್ಗ, ನ 3 (DaijiworldNews/SK): ಬಿಜೆಪಿ ಈಗಾಗಲೇ ಲೋಕಸಭಾ ಚುನಾವಣೆಗೆ ತಯಾರಿ ನಡೆಸುತ್ತಿದ್ದು, ರಾಜ್ಯದಲ್ಲಿಯೇ ನಮ್ಮ ಪಕ್ಷವೇ ಅತಿ ಹೆಚ್ಚು ಸ್ಥಾನ ಪಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.
ಶಿವಮೊಗ್ಗದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ನಮ್ಮ ಪಕ್ಷದ ವತಿಯಿಂದ ಶೀಘ್ರದಲ್ಲೆ ಬಿಡುಗಡೆ ಮಾಡಲಾಗುವುದು ಎಂದಿದ್ದಾರೆ.
ವಿಪಕ್ಷ ನಾಯಕರ ಆಯ್ಕೆ ಕುರಿತಂತೆ ಮಾತನಾಡಿದ ಅವರು, ವಿಪಕ್ಷ ನಾಯಕರ ಆಯ್ಕೆ ಪ್ರಕ್ರಿಯೆ ಈಗಾಗಲೇ ವಿಳಂಬವಾಗಿದೆ. ಎಲ್ಲರೂ ವಿಪಕ್ಷ ನಾಯಕನ ಆಯ್ಕೆ ಯಾವಾಗ ಎಂಬ ಪ್ರಶ್ನೆಯನ್ನು ಕೇಳುತ್ತಿದ್ದಾರೆ. ಆದಷ್ಟು ಶೀಘ್ರವಾಗಿ ವಿಪಕ್ಷ ನಾಯಕರನ್ನು ಹೈಕಮಾಂಡ್ ನೇಮಿಸಲಿದೆ ಎಂದು ಹೇಳಿದ್ದಾರೆ.