ಬೆಂಗಳೂರು: ನ 05 (DaijiworldNews/MR): ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಪ್ರತ್ಯೇಕ ಕಡೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.
ರಾಜ್ಯದಲ್ಲಿ ಮುಂದಿನ ಒಂದು ವಾರ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು. ಕೊಡಗಿನಲ್ಲಿ ಆರೆಂಜ್ ಅಲರ್ಟ್ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ನ.5 ರಂದು ಕೊಡಗಿನಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ. ಇನ್ನು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು ಸೇರಿದಂತೆ ಹಾಸನ, ಮಂಡ್ಯ, ಮೈಸೂರು ಹಾಗೂ ಶಿವಮೊಗ್ಗದಲ್ಲೂ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷನೆ ಮಾಡಲಾಗಿದೆ.