ಬೆಂಗಳೂರು, ನ.05 (DaijiworldNews/AA) : ಗಣಿ-ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಯೊಬ್ಬರ ಮನೆಗೆ ದುಷ್ಕರ್ಮಿಗಳು ನುಗ್ಗಿ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿದ ಘಟನೆ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರವಿವಾರ ನಡೆದಿದೆ.
ಗ್ರಾಮಾಂತರ ವಿಭಾಗದ ಗಣಿ-ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಪ್ರತಿಮಾ ಅವರನ್ನು ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಪ್ರತಿಮಾ ಅವರು ತಮ್ಮ ಮನೆಯಲ್ಲಿ ಒಂಟಿಯಾಗಿ ನೆಲೆಸಿದ್ದರು. ಅವರು ಮನೆಯಲ್ಲಿ ಒಬ್ಬರೇ ಇದ್ದಂತಹ ವೇಳೆ ದುಷ್ಕರ್ಮಿಗಳು ಮನೆಗೆ ನುಗ್ಗಿ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾರೆ ಎಂದು ವರದಿಯಾಗಿದೆ.
ಪತಿಯಿಂದ ದೂರವಾಗಿದ್ದ ಪ್ರತಿಮಾ ದೊಡ್ಡಕಲ್ಲಸಂದ್ರದ ಅಪಾರ್ಟ್ ಮೆಂಟ್ ವೊಂದರಲ್ಲಿ ಒಂಟಿಯಾಗಿ ವಾಸಿಸುತ್ತಿದ್ದರು. ಇನ್ನು ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿರುವ ಸುಬ್ರಹ್ಮಣ್ಯನಗರ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.