ಕೋಲ್ಕತ್ತಾ, ನ 5(DaijiworldNews/RA): ಈಡನ್ ಗಾರ್ಡನ್ಸ್ನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಇಂದು ನಡೆಯುವ ವಿಶ್ವಕಪ್ ಕ್ರಿಕೆಟ್ ಪಂದ್ಯದ ಟಿಕೆಟ್ನ್ನು ಬ್ಲ್ಯಾಕ್ ಮಾರ್ಕೆಟಿಂಗ್ ಮಾಡಿದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಈವೆಂಟ್ನ ಟಿಕೆಟ್ ಮಾರಾಟದ ಬಗ್ಗೆ ಮಾಹಿತಿ ನೀಡುವಂತೆ ಬಿಸಿಸಿಐ ನೋಟೀಸ್ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಅವರಿಗೆ ನೋಟಿಸ್ ನೀಡಿದ್ದಾರೆ ಎಂದು ಮಾಹಿತಿ ಇದೆ . ಬ್ಲ್ಯಾಕ್ ಮಾರ್ಕೆಟಿಂಗ್ ಕುರಿತು ಕೋಲ್ಕತ್ತಾ ಪೊಲೀಸರು ಇದುವರೆಗೆ 19 ಜನರನ್ನು ಬಂಧಿಸಿದ್ದಾರೆ. ಬಂಧಿತರಿಂದ 108 ಟಿಕೆಟ್ನ್ನು ವಶಪಡಿಸಿಕೊಂಡಿದ್ದಾರೆ.
ಟಿಕೆಟ್ ಬ್ಲ್ಯಾಕ್ ಮಾರ್ಕೆಟಿಂಗ್ಸ್ ಸಂಬಂಧಿಸಿದಂತೆ ಏಳು ಪ್ರಕರಣಗಳನ್ನು ದಾಖಲಿಸಿದ್ದಾರೆ.ಈ ಕುರಿತು ಹಿರಿಯ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.