ರಾಮನಗರ, ನ.6 (DaijiworldNews/AK): ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರಿಗಳಿಗೆ, ಜನಸಾಮಾನ್ಯರಿಗೆ ರಕ್ಷಣೆ ಇಲ್ಲ. ರಾಜ್ಯದ ಹಿರಿಯ ಅಧಿಕಾರಿನ್ನು ಮನೆಗೆ ನುಗ್ಗಿ ಹತ್ಯೆ ಮಾಡಿದ್ದಾರೆ ಅಂದರೆ ಇವರ ಉದ್ಧಟತನ ಎಷ್ಟಿದೆ ಅಂತ ಗೊತ್ತಾಗುತ್ತಿದೆ. ಈ ಘಟನೆಗೆ ಸರ್ಕಾರ, ಗೃಹ ಇಲಾಖೆಯ ವೈಫಲ್ಯವೇ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗಣಿ ಮತ್ತು ಭೂವಿಜ್ಞಾನ ಅಧಿಕಾರಿ ಪ್ರತಿಮಾ ಹತ್ಯೆವಿಚಾರದ ಮಾತನಾಡಿದ ಅವರು, ಇಂತಹ ವಾತಾವರಣ ನಿರ್ಮಾಣ ಆದರೆ ಯಾವ ಅಧಿಕಾರಿ ಪ್ರಾಮಾಣಿಕವಾಗಿ ಕೆಲಸ ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು.
ಸಮಾಜಘಾತುಕ ಶಕ್ತಿಗಳಿಗೆ ಯಾವುದೇ ಲಂಗುಲಗಾಮು ಇಲ್ಲದಂತಾಗಿದೆ. ಗೃಹ ಇಲಾಖೆಯ ವೈಫಲ್ಯ ಕೂಡ ಇದರಲ್ಲಿ ಎದ್ದು ಕಾಣುತ್ತಿದೆ ಎಂದು ಟೀಕಿಸಿದರು.
ಯಾವ ಭಾಗದಲ್ಲಿ ಏನೇನು ನಡೆಯುತ್ತದೆ ಎಂದು ಪೊಲೀಸ್ ಇಲಾಖೆಗೆ ಮಾಹಿತಿ ಇರುತ್ತದೆ. ಆದರೂ ಅಧಿಕಾರಿಗಳು ಸ್ವತಂತ್ರವಾಗಿ ಕೆಲಸ ಮಾಡುವ ವಾತಾವರಣ ಇಲ್ಲ ಎಂದು ಕಿಡಿಕಾರಿದರು.
ಸರ್ಕಾರ ಈ ಘಟನೆ ಬಗ್ಗೆ ತಪ್ಪಿತಸ್ಥರ ವಿರುದ್ಧ ಕಠಿಣವಾದ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.