ಕೊಪ್ಪಳ, ನ 07 (DaijiworldNews/AA) : ರೈತ ವಿರೋಧಿ ರಾಜ್ಯ ಸರ್ಕಾರಕ್ಕೆ ಕಣ್ಣು, ಕಿವಿ ಏನೂ ಇಲ್ಲ. ಇದೊಂದು ಹುಚ್ಚು ದೊರೆ ಸರ್ಕಾರವಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬರ ಅಧ್ಯಯನ ಪ್ರವಾಸಕ್ಕೆಂದು ಕೊಪ್ಪಳ ಜಿಲ್ಲೆಗೆ ಮಂಗಳವಾರ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ವಿರೋಧಿಯಾಗಿರುವ ಸಿಎಂ ಸಿದ್ದರಾಮಯ್ಯ ಮತ್ತು ಇಂಧನ ಸಚಿವ ಜಾರ್ಜ್ ಕೂಡಲೇ ಅವರ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ಸಿಎಂ ಸಿದ್ಧರಾಮಯ್ಯ ಅವರ ಮಾತೇ ಯಾರೂ ಕೇಳೋದಿಲ್ಲ. ಇನ್ನು ಸಚಿವರ ಮಾತನ್ನ ಯಾರು ಕೇಳುತ್ತಾರೆ. ಎಲ್ಲರೂ ಕೂಡ ಬಾಯಿ ಮುಚ್ಚಿಕೊಂಡಿರಬೇಕು. ಈ ಹಿಂದೆ ಸುರ್ಜೇವಾಲ ಹಾಗೂ ವೇಣುಗೋಪಾಲ್ ಹಾದಿ ಬೀದಿಯಲ್ಲಿ ನಿಂತು ಮಾತನಾಡದಂತೆ ತಿಳಿಸಿದ್ದರು. ಆದಾಗ್ಯೂ ಸಿದ್ದರಾಮಯ್ಯ ಮಾತನಾಡಿದರು. ಸಿಎಂ ಸಿದ್ಧರಾಮಯ್ಯ ಅವರದ್ದು ಪಕ್ಷದೊಳಗೆ ಏನೂ ನಡೆಯೋದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.