ಬೆಂಗಳೂರು, ನ 9 (DaijiworldNews/PC): ಬಿಜೆಪಿ ಎಷ್ಟೇ ಪ್ರಯತ್ನಿಸಿದರೂ ನಮ್ಮ ಒಬ್ಬ ಶಾಸಕರನ್ನೂ ಸೆಳೆಯಲು ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಾಗ್ದಾಳಿಯನ್ನು ನಡೆಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಡಿ.ಕೆ. ಶಿವಕುಮಾರ್ ಲೋಕಸಭಾ ಚುನಾವಣೆಗೆ ಮೊದಲೇ ಗೊಂದಲ ಸೃಷ್ಟಿಸುವ ಪ್ರಯತ್ನ ನಡೆಯುತ್ತಿದೆ. ನಾನು ಏನನ್ನೂ ಹೇಳಲಾರೆ. ಬಿಜೆಪಿ ಪಕ್ಷದ ನಾಯಕತ್ವದ ಪರಿಸ್ಥಿತಿ ಹದಗೆಟ್ಟಿದೆ. ಅದನ್ನು ಹೊರಗೆ ಹೇಳಿಕೊಳ್ಳಲು ಆಗದೆ, ಇಂತಹ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಈ ತಿಂಗಳ 15ರಂದು ಬಿಜೆಪಿ ಹಾಗೂ ಜೆಡಿಎಸ್ನ ಕೆಲವು ನಾಯಕರು ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ಬೇರೆ ಪಕ್ಷಗಳ ನಾಯಕರ ಸೇರ್ಪಡೆಯ ಸುಳಿವು ನೀಡಿದ್ದಾರೆ. ನ.14ರ ಸಂಜೆ ಯಾರು ಸೇರಿಕೊಳ್ಳಲಿದ್ದಾರೆ ಎಂಬ ಮಾಹಿತಿ ಕೊಡುವುದಾಗಿ ಡಿಸಿಎಂ ಹೇಳಿದ್ದಾರೆ.