ನವದೆಹಲಿ, ನ 27 (DaijiworldNews/HR): ಡಿಸೆಂಬರ್ 4 ರಿಂದ 22 ರವೆರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ತಿಳಿದು ಬಂದಿದೆ.
ಡಿಸೆಂಬರ್ 3 ರಂದು 5 ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾದ ಮರುದಿನವೇ ಅಧಿವೇಶನ ಪ್ರಾರಂಭವಾಗಲಿದ್ದು, ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಸಂಬಂಧಿಸಿದಂತೆ ಸರ್ಕಾರದ ಪರವಾಗಿ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಡಿಸೆಂಬರ್ 2 ರಂದು ಬೆಳಿಗ್ಗೆ 11 ಗಂಟೆಗೆ ಸರ್ವಪಕ್ಷ ಸಭೆಯನ್ನು ಕರೆದಿದ್ದಾರೆ.
ಇನ್ನು ಈ ಸಭೆಗಳಲ್ಲಿ ಹಲವು ಮಹತ್ವದ ಮಸೂದೆಗಳು ಸದನದ ಮುಂದೆ ಬರುವ ಸಾಧ್ಯತೆ ಇದೆ. ವಾಸ್ತವವಾಗಿ ಡಿಸೆಂಬರ್ 3 ರಂದು ಸಂಸತ್ ಅಧಿವೇಶನ ಪ್ರಾರಂಭವಾಗುವ ಒಂದು ದಿನ ಮುಂಚಿತವಾಗಿ ಸರ್ವಪಕ್ಷಗಳ ಸಭೆ ನಡೆಯಬೇಕಿತ್ತು ಆದರೆ 5 ರಾಜ್ಯಗಳ ಚುನಾವಣಾ ಫಲಿತಾಂಶಗಳು ಒಂದೇ ದಿನದಲ್ಲಿ ಪ್ರಕಟವಾಗುವುದರಿಂದ ಡಿಸೆಂಬರ್ 2 ರಂದು ಸಭೆ ನಡೆಯಲಿದೆ.