ಬೆಂಗಳೂರು, ನ 27 (DaijiworldNews/HR): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ‘ಜನಸ್ಪಂದನ’ ಕಾರ್ಯಕ್ರಮಕ್ಕೆ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಅನೇಕ ಮಂದಿ ಆಗಮಿಸಿದ್ದು, ಜನಸಾಗರವೆ ಹರಿದು ಬಂದಿದೆ.
ಮುಖ್ಯಮಂತ್ರಿಯ ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ ಬೆಳಗ್ಗೆ 10 ಗಂಟೆಯಿಂದ ಆರಂಭವಾದ ‘ಜನಸ್ಪಂದನ’ ಕಾರ್ಯಕ್ರಮಕ್ಕೆ ರಾಜ್ಯದ ಜನರಿಂದ ಉತ್ತಮ ಸ್ಪಂದನೆ ದೊರೆತಿದೆ.
ಇನ್ನು ಒಟ್ಟು 3,812 ಅರ್ಜಿಗಳನ್ನು ಸ್ವತಃ ಸ್ವೀಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಜನರ ಸಮಸ್ಯೆಗಳಿಗೆ ಪರಿಹಾರ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಥಳದಲ್ಲೇ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ.