ಬೆಂಗಳೂರು, ನ 27(DaijiworldNews/PC): ನೂತನ ರಾಜ್ಯಾದ್ಯಕ್ಷನಾಗಿ ಆಯ್ಕೆಯಾದ ಬಿ ವೈ ವಿಜಯೇಂದ್ರ ಹೆಸರನ್ನು ದುರ್ಬಳಕೆ ಮಾಡಿ ಬ್ಯಾಂಕ್ ಸಾಲ ಉದ್ಯಮಿಗಳನ್ನು ವಂಚಿಸುತ್ತಿದ್ದವನನ್ನು ಬಂಧಿಸಲಾಗಿದೆ.
ಯೂಸುಫ್ ಎಂಬ ವ್ಯಕ್ತಿಯು ಈತನಿಗೆ ವಿಜಯೇಂದ್ರ ಅವರೊಂದಿಗೆ ಉತ್ತಮ ನಂಟು ಹಾಗೂ ರಾಜಕೀಯ ಚಟುವಟಿಕೆಗಳಿಗಾಗಿ ಉನ್ನತ ಬಿಜೆಪಿ ನಾಯಕರೊಂದಿಗೆ ಸಂಪರ್ಕ ಹೊಂದಿರುವುದಾಗಿ ಹೇಳಿ ಸಚಿವರು ಮತ್ತು ಅಧಿಕಾರಿಗಳಿಗೆ ಪಾವತಿ ಮೂಲಕ ಸರ್ಕಾರಕ್ಕೆ ಸಂಬಂಧಿಸಿದ ಉದ್ಯಮದ ಕೆಲಸಕ್ಕೆ ಅನುಕೂಲ ಮಾಡಿಕೊಡುವುದಾಗಿ ಭರವಸೆ ನೀಡಿ ಉದ್ಯಮಿಗಳಿಂದ ಹಣ ಪಡೆದಿದ್ದ ಎನ್ನಲಾಗಿದೆ ಈ ಮೂಲಕ ವಿವಿಧ ವ್ಯಕ್ತಿಗಳನ್ನು ವಂಚಿಸಿದ್ದಾನೆ.
ವಂಚನೆಗೆ ಒಳಗಾದ ಕೃಷ್ಣನ್ ಅವರ ದೂರಿನ ಆಧಾರದ ಮೇಲೆ ವಂಚನೆ ಪ್ರಕರಣವನ್ನು ದಾಖಲಿಸಲಾಗಿದ್ದು ಈಗ ಯೂಸುಫ್ ಅವರನ್ನು ಮಲ್ಲೇಶ್ವರಂ ಪೊಲೀಸರು ಬಂಧಿಸಿದ್ದಾರೆ.