ನವದೆಹಲಿ, ನ 28 (DaijiworldNews/HR): ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ (ಇಡಿ) ಬಂಧನೊಳಕ್ಕಾಗಿದ್ದ ತಮಿಳುನಾಡು ಸಚಿವ ಹಾಗೂ ಡಿಎಂಕೆ ನಾಯಕ ಸೆಂಥಿಲ್ ಬಾಲಾಜಿ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನಿರಾಕರಿಸಿದೆ.
ಮದ್ರಾಸ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ ಹಾಗೂ ಸತೀಶ್ ಚಂದ್ರ ಶರ್ಮಾ ಅವರಿದ್ದ ದ್ವಿಸದಸ್ಯ ಪೀಠವು ಜಾಮೀನು ನಿರಾಕರಿಸಿದೆ ಎಂದು ವರದಿಯಾಗಿದೆ.
ಇನ್ನು ಅನಾರೋಗ್ಯ, ವೈದ್ಯಕೀಯ ಕಾರಣಗಳನ್ನು ನೀಡಿದ್ದ ಸೆಂಥಿಲ್ ಬಾಲಾಜಿ ಜಾಮೀನು ನೀಡುವಂತೆ ಈ ಮೊದಲು ಮದ್ರಾಸ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು, ಈ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದ್ದು, ಈ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿತ್ತು.