ಬೆಂಗಳೂರು, ನ 28 (DaijiworldNews/MS): ಸರ್ಕಾರದ ತೀರ್ಮಾನವನ್ನು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಲು ಎಲ್ಲರಿಗೂ ಹಕ್ಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸರ್ಕಾರದ ನಡೆಯನ್ನು ಪ್ರಶ್ನಿಸಿ ಹೈಕೋರ್ಟ್ಗೆ ಮಧ್ಯಂತರ ಅರ್ಜಿ ಸಲ್ಲಿಸಿರುವ ವಿಚಾರದ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ನ್ಯಾಯಾಲಯದ ಮೊರೆ ಹೋಗಲು ಎಲ್ಲರಿಗೂ ಹಕ್ಕಿದ್ದು, ಆದರೆ ಅಂತಿಮ ತೀರ್ಮಾನ ನ್ಯಾಯಾಲಯದ್ದೇ ಆಗಿರುತ್ತದೆ ಎಂದು ತಿಳಿಸಿದ್ದಾರೆ.
ಹಿಂದಿನ ಸರ್ಕಾರ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ತನಿಖೆಗೆ ನೀಡಿರುವ ಅನುಮತಿ ಕಾನೂನು ಬಾಹಿರವಾಗಿದ್ದು, ಹೀಗಾಗಿ ಆದೇಶವನ್ನು ವಾಪಸ್ಸು ಪಡೆದಿದೆ ಎಂದರು.