ಗುಜರಾತ್, ನ 30 (DaijiworldNews/HR): ಸೂರತ್ನ ಈಥರ್ ಇಂಡಸ್ಟ್ರೀಸ್ನ ಉತ್ಪಾದನಾ ಸ್ಥಳದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಏಳು ಕಾರ್ಮಿಕರು ಸುಟ್ಟು ಕರಕಲಾಗಿದ್ದು, 27 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಬುಧವಾರ ಮುಂಜಾನೆ ಈ ಘಟನೆ ನಡೆದಿದ್ದು, ಏಳು ಕಾರ್ಮಿಕರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿತ್ತು.
ಇನ್ನು ಆ ಬಳಿಕ ರಕ್ಷಣಾ ತಂಡ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಗುರುವಾರ ಏಳು ದೇಹಗಳು ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮೃತ ದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.