ಹೈದರಾಬಾದ್ , ನ 30 (DaijiworldNews/AK): ಕರ್ನಾಟಕದ ಚುನಾವಣಾ ಫಲಿತಾಂಶ ತೆಲಂಗಾಣದಲ್ಲೂ ಪುನರಾವರ್ತನೆಯಾಗಲಿದೆ ಎಂದು ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದ ವಿವಿಧ ಮತಗಟ್ಟೆಗಳಲ್ಲಿ ಭದ್ರತೆಯೊಂದಿಗೆ ಮತದಾನ ನಡೆಯುತ್ತಿದೆ. ಇತ್ತ ಮತ ಚಲಾಯಿಸಿದ ಬಳಿಕ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, 'ಕಾಂಗ್ರೆಸ್ ಮೂರನೇ ಎರಡರಷ್ಟು ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಅಲ್ಲದೆ ತೆಲಂಗಾಣದಲ್ಲಿ ಕರ್ನಾಟಕದ ಫಲಿತಾಂಶಗಳನ್ನು ಪುನರಾವರ್ತಿಸುತ್ತೇವೆ. ಭಾರತ್ ಜೋಡೋ ಯಾತ್ರೆಯ ನಂತರ ತೆಲಂಗಾಣ ನೆಲದ ಪರಿಸ್ಥಿತಿ ಸಾಕಷ್ಟು ಬದಲಾಗಿದೆ' ಎಂದು ಹೇಳಿದರು.
ಒಂದು ವೇಳೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿಯಾಗುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, 85 ಶಾಸಕರಿದ್ದಾರೆ, ಎಲ್ಲರೂ ಸಿಎಂ ಹುದ್ದೆಗೆ ಸಮರ್ಥರು, ಆ ಕ್ರಿಯೆಗೆ ಪ್ರಕ್ರಿಯೆಯೊಂದು ಇದೆ ಎಂದರು.